ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಂತಿವೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಎಡವಿಹಾಳ ಗ್ರಾಮದ ಬಳಿ ತು೦ಗಭದ್ರಾ ನದಿಯಿ೦ದ ನೀರು ಎತ್ತಿ ಸುಮಾರು 10 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ₹109 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ವಿಶ್ವೇಶ್ವರಯ್ಯ ನಾಲಾ ಜಾಲದಡಿಯಲ್ಲಿ ಬರುವ ಹೆಬ್ಬಕ್ಕವಾಡಿ ಶಾಖಾ ನಾಲೆ ಮತ್ತು ನಿಡಘಟ್ಟ ಶಾಖಾ ನಾಲೆಯ ಅಭಿವೃದ್ಧಿ ಕಾಮಗಾರಿಗಳನ್ನು ₹293.47 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೊಸಹೊಳಲು ಎಡದಂಡೆ ನಾಲೆಯ ಉಳಿಕೆ ಕಾಮಗಾರಿ ಹಾಗೂ ಆಧುನಿಕರಣ ಕಾಮಗಾರಿಯನ್ನು ₹21.50 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಹತ್ತಿರ ಮಲಪ್ರಭಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಮತ್ತು ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಯನ್ನು ₹50 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಬೆಂಗಳೂರಿನ ಯಲಹಂಕ ತಾಲೂಕು ಬೆಳ್ಳಹಳ್ಳಿಯಲ್ಲಿ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕೃಷಿ ಇಲಾಖೆ ಆವರಣದಲ್ಲಿ ತಲಾ ರೂ. 50 ಕೋಟಿಗಳ ಅಂದಾಜು ವೆಚ್ಚದಲ್ಲಿ ಪ್ರತ್ಯೇಕವಾಗಿ 100 ಹಾಸಿಗೆಗಳ ಸಾಮರ್ಥ್ಯದ 2 ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆ ಕಟ್ಟಡಗಳನ್ನು ನಿರ್ಮಿಸಲು ತೀರ್ಮಾನ
ಮ೦ಡ್ಯ ಜಿಲ್ಲೆ ಶ್ರೀರ೦ಗಪಟ್ಟಣ ತಾಲೂಕು ವ್ಯಾಪ್ತಿಯ ಸಿಡಿಎಸ್ ನಾಲೆಯಡಿಯಲ್ಲಿ ಬರುವ ಪಿಕಪ್ ಮತ್ತು ತೂಬಿನ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ರೂ.50 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

