ಕಾರವಾರ: ಎರಡು ದಿನಗಳ ಹಿಂದಷ್ಟೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಸ್ತಿ ಆಸೆಗಾಗಿ ಅಣ್ಣನೇ ತಮ್ಮನ ಹೆಂಡತಿಯನ್ನು ಕೊಲೆಗೈದಿದ್ದ ಭೀಕರ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವ್ವೇ ಇದೀಗ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿಯೂ ಇಂಥದ್ದೇ ಘಟನೆ ನಡೆದಿದೆ.
ಅಣ್ಣನೇ ತಮ್ಮನ ಪತ್ನಿಯನ್ನು ಗುದ್ದಲಿಯಿಂದ ಹೊಡೆದು ಹತ್ಯೆಗೈದಿರುವ ಘಟನೆ ಜಿಲ್ಲೆಯ ಜೋಯಿಡಾ ತಾಲೂಕಿನ ಆಮಶೇತ–ಕೊಲೆಮಾಳ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ ಸೋನು ವರಕ (35) ಕೊಲೆಯಾದ ಮಹಿಳೆ. ಧೊಂಡು ಗಂಗಾರಾಮ ವರಕ (50) ಕೊಲೆ ಮಾಡಿರುವ ಆರೋಪಿ. ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.