HomeLatest NewsRAIN ALERT: ಉತ್ತರ ಒಳನಾಡಿನಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಉತ್ತರ ಒಳನಾಡಿನಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಿದ್ದು, ಇಂದಿನಿಂದ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾವೇರಿ, ಚಾಮರಾಜನಗರ, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular