BREAKING : ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ |WATCH VIDEO

ನವದೆಹಲಿ : ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ರಾಧಾಕೃಷ್ಣನ್ ಅವರು 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ .ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಭೋದಿಸಿದ್ದಾರೆ.ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಕರ್ನಾಟದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೈರಾಗಿದ್ದರು.

NDA ಯ ಸಿಪಿ ರಾಧಾಕೃಷ್ಣನ್ ಅವರನ್ನು ಭಾರತದ ಮುಂದಿನ ಉಪರಾಷ್ಟ್ರಪತಿ ಎಂದು ಘೋಷಿಸಲಾಗಿತ್ತು., ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್’ಗೆ ಮತ ಹಾಕಿದರು, ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಈ ಬೆಳವಣಿಗೆ ನಡೆದಿದೆ.ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ 452 ಮತಗಳನ್ನು ಗಳಿಸುವ ಮೂಲಕ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಉಪರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read