ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ನಿರ್ದೇಶಕ ಎಸ್.ನಾರಾಯಣ್, ಪತ್ನಿ ಭಾಗ್ಯವತಿ ಹಾಗೂ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.
ಎಸ್.ನಾರಾಯಣ್ ಅವರ ಎರಡನೇ ಪುತ್ರ ಪವನ್ ಪತ್ನಿ ಪವಿತ್ರ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದು, ಎಸ್. ನಾರಾಯಣ್, ಪತ್ನಿ ಹಾಗೂ ಪುತ್ರನಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಇನ್ನೊಂದೆಡೆ ಪವಿತ್ರಾ ದೂರುನ ಹಿನ್ನೆಲೆಯಲ್ಲಿ ಪೊಲೀಸರು ಆರ್.ಆರ್. ನಗರದಲ್ಲಿರುವ ಎಸ್.ನಾರಾಯಣ್ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸೊಸೆ ಪವಿತ್ರಾ ಅವರಿಗೂ ನೋಟಿಸ್ ನೀಡಿದ್ದು, ದೂರುಗೆ ಸಂಬಂಧಿಸಿದಂತೆ ಸಾಕ್ಷಾಧಾರಗಳನ್ನು ಒದಗಿಸುವಂತೆ ಸೂಚಿಸಿದ್ದಾರೆ.