ಶುಕ್ರವಾರ ದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ ಬಂದಿದ್ದು, ಮುನ್ನೆಚ್ಚರಿಕೆಯಾಗಿ ನ್ಯಾಯಾಧೀಶರು, ವಕೀಲರು, ದಾವೆ ಹೂಡುವವರು ಮತ್ತು ಸಿಬ್ಬಂದಿಯನ್ನು ಆವರಣದಿಂದ ಸ್ಥಳಾಂತರಿಸಲಾಯಿತು.
ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ನ್ಯಾಯಾಲಯದ ಆವರಣದಲ್ಲಿ ಮೂರು ಬಾಂಬ್ಗಳನ್ನು ಇರಿಸಲಾಗಿದ್ದು, ಮಧ್ಯಾಹ್ನ 2 ಗಂಟೆಯೊಳಗೆ ಬಾಂಬ್ ಸ್ಪೋಟವಾಗಲಿದೆ ಎಂದು ಇಮೇಲ್ ಮೂಲಕ ಬೆದರಿಕೆ ಕಳುಹಿಸಲಾಗಿದೆ., ಸಂದೇಶದಲ್ಲಿ ಸ್ಫೋಟಕಗಳ ನಿಖರವಾದ ಸ್ಥಳಗಳನ್ನು ನಿರ್ದಿಷ್ಟಪಡಿಸಲಾಗಿಲ್ಲ. ಬಾಂಬ್ ಪತ್ತೆ ಮತ್ತು ವಿಲೇವಾರಿ ದಳವನ್ನು ತಕ್ಷಣವೇ ನಿಯೋಜಿಸಲಾಯಿತು ಮತ್ತು ಸಂಪೂರ್ಣ ಶೋಧಕ್ಕಾಗಿ ಪ್ರದೇಶವನ್ನು ಸುತ್ತುವರಿಯಲಾಯಿತು.