ಮಹಾರಾಷ್ಟ್ರದ ನಾಗಪುರದಲ್ಲಿನ ‘ದೀಕ್ಷಾ ಭೂಮಿ’ ಯಾತ್ರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾ ಭೂಮಿ ಯಾತ್ರೆಗೆ ಕರೆದುಕೊಂಡು ಹೋಗಿ ಬರುವ ಸಲುವಾಗಿ ಬಸ್ಸು ಮತ್ತು ರೈಲಿನ ಮೂಲಕ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಯಾತ್ರಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 2025ರ ಸೆಪ್ಟೆಂಬರ್ 15 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತ ಯಾತ್ರಿರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ https://swdservices.karnataka.gov.in/ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು -64 ಅಥವಾ ದೂರವಾಣಿ ಸಂಖ್ಯೆ : 080-28461351 ಅಥವಾ ಇಲಾಖೆಯ ಸಹಾಯವಾಣಿ ಸಂಖ್ಯೆ : 9482300400 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read