ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿಯಿಂದ ವಿಚಾರಣೆಗೆ ಒಳಪಟ್ಟಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಎಸ್ ಐಟಿ ವಿಚಾರಣೆ ಬಳಿಕ ಇದೇ ಮೊದಲ ಬಾರಿಗೆ ವಿಡಿಯೋ ಅಪ್ ಲೋಡ್ ಮಾಡಿದ್ದಾರೆ.
ಇನ್ ಸ್ಟಾಗ್ರಾಂ ಖಾತೆಯಲ್ಲಿ ಹೊಸ ವಿಡಿಯೋ ಬಿಡುಗಡೆ ಮಾಡಿರುವ ಸಮೀರ್ ಎಂ.ಡಿ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಷಡ್ಯಂತ್ರ ಆರೋಪ ಪ್ರಕರಣ ಸಂಬಂಧ ವಿದೇಶದಿಂದ ತನಗೆ ಫಂಡಿಂಗ್ ಆಗಿದೆ ಎಂದು ಆರೋಪಿಸಲಾಗಿದೆ. ಆದರೆ ತನಗೆ ಯಾವುದೇ ರೀತಿಯ ವಿದೇಶಿ ಹಣ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತನ್ನ ಬ್ಯಾಂಕ್ ಖಾತೆಗೆ ಯಾವುದೇ ಫಂಡಿಂಗ್ ಆಗಿಲ್ಲ ಎಂಬ ಬಗ್ಗೆ ತನ್ನ ಬಳಿ ಇರುವ ಎರಡು ಬ್ಯಾಂಕ್ ಖಾತೆಗಳ ವಿವರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ವಿಡಿಯೋದಲ್ಲಿ ಸಮೀರ್ ತನ್ನ ಬ್ಯಾಂಕ್ ಖಾತೆಗಳ ವಿವರ, ಹಣ ಟ್ರಾನ್ಸೆಕ್ಷನ್ ಹಿಸ್ಟರಿ ಬಗ್ಗೆ ವಿವರಿಸಿದ್ದು, ತನಗೆ ಯಾವುದೇ ವಿದೇಶಿ ಹಣ ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ನಾನು ಪೊಲೀಸರಿಗೂ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ನನ್ನ ವಿರುದ್ಧದ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ. ಈ ಮೂಲಕ ಸಮೀರ್ ಎಂಡಿ ಸೋಷಿಯಲ್ ಮೀಡಿಯಾದಲ್ಲಿ ಹೊಸ ವಿಡಿಯೋ ಅಪ್ ಲೋಡ್ ಮಾಡಿದ್ದಾರೆ.
ಇದೇ ವೇಳೆ ಧರ್ಮಸ್ಥಳ ಪ್ರಕರಣ ಸಂಬಂಧ ಹಲವಾರು ವಿಚಾರಗಳನ್ನು, ಪ್ರಶ್ನೆಗಳನ್ನೂ ಮುಂದಿಟ್ಟಿದ್ದಾರೆ.