ಬಳ್ಳಾರಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವಡ್ಡು ಗ್ರಾಮದ ಬಳಿ ನಡೆದಿದೆ.
ಕರೆಕೊಪ್ಪದ ತ್ರಿವಿಕ್ರಮ(19), ತೋರಣಗಲ್ ನ ರವಿತೇಜ(19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕರೆಕೊಪ್ಪ ನಿವಾಸಿ ಬಸನಗೌಡ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದರು. ಮಳೆ ಸುರಿಯುತ್ತಿದ್ದರಿಂದ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ಪೆಟ್ಟು ಬಿದ್ದು ಸ್ನೇಹಿತರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.