HomeLatest Newsಸಿದ್ಧರಾಮಯ್ಯ ಫೋಟೋ ಬಳಸಿ ಕೋಮು ಪ್ರಚೋದನೆ: ‘ಪೋಸ್ಟ್ ಕಾರ್ಡ್’ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆ ಅರೆಸ್ಟ್

ಸಿದ್ಧರಾಮಯ್ಯ ಫೋಟೋ ಬಳಸಿ ಕೋಮು ಪ್ರಚೋದನೆ: ‘ಪೋಸ್ಟ್ ಕಾರ್ಡ್’ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆ ಅರೆಸ್ಟ್

ಮಂಗಳೂರು: ‘ಪೋಸ್ಟ್ ಕಾರ್ಡ್’ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆ ಅವರನ್ನು ಬಂಧಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ ಕೋಮು ಪ್ರಚೋದನೆ ಆರೋಪದಡಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಮಹೇಶ್ ವಿಕ್ರಂ ಹೆಗಡೆ ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡಬಿದರೆ ಪಿಎಸ್ಐ ಕೃಷ್ಣಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರ ಆದೇಶದಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ಮಹೇಶ್ ವಿಕ್ರಂ ಹೆಗಡೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸೋಮವಾರದವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular