HomeLatest NewsBREAKING: ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು 9 ಜನ ಸಾವು: ಮೃತರ ಕುಟುಂಬಕ್ಕೆ ತಲಾ...

BREAKING: ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು 9 ಜನ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹಾಸನ: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಟ್ರಕ್ ಹರಿದು ಭೀಕರ ದುರಂತ ಸಂಭವಿಸಿದೆ.

ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಗಣೇಶ ಮೆರವಣಿಗೆ ಸಾಗುತ್ತಿದ್ದ ವೇಳೆಯಲ್ಲಿ ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ದಾಟಿಕೊಂಡು ಟ್ರಕ್ ನುಗ್ಗಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಟ್ರಕ್ ಹರಿದಿದ್ದು, ಟ್ರಕ್ ನಡಿ ಸಿಲುಕಿದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ 5 ಜನ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದಿಂದ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular