ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗೃಹಕಚೇರಿ ಕೃಷ್ಣಾದಲ್ಲಿ ವಿವಿಧ ಪೌರ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಸಭೆ ನಡೆಸಿದ್ದಾರೆ.
ಸಭೆಯ ಮುಖ್ಯಾಂಶಗಳು ಹೀಗಿವೆ:
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ 2,992 ಹುದ್ದೆಗಳ ಪೈಕಿ 492 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇನ್ನುಳಿದ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ವೇತನ ಅಡಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮೃತಪಟ್ಟ ಪೌರ ಕಾರ್ಮಿಕರ ಅವಲಂಬಿತರಿಗೆ ರೂ.10 ಲಕ್ಷ ಪರಿಹಾರವನ್ನು ನಗರ ಸ್ಥಳೀಯ ಸಂಸ್ಥೆಗಳ ಸ್ವಂತ ಸಂಪನ್ಮೂಲದಿಂದ ಭರಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.