HomeLatest Newsರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾದ ಬಳಿಕ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸೆಪ್ಟೆಂಬರ್ 16ರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶುಕ್ರವಾರ ಕಲಬುರಗಿ, ಯಾದಗಿರಿ, ಕೊಪ್ಪಳ, ಬೀದರ್, ರಾಯಚೂರು, ವಿಜಯಪುರ ಸೇರಿ ವಿವಿಧೆಡೆ ಮಿಂಚು ಬಿರುಗಾಳಿ ಸಹಿತ ಮಳೆಯಾಗಿದೆ. ಮುಂದಿನ ಮೂರು ದಿನ ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ.

ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರಿನಲ್ಲಿ ಸೆ. 13ರಂದು ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿಯಲ್ಲಿ ಸೆ.14 ರಿಂದ ಎರಡು ದಿನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಕೋಲಾರ ಭಾಗದಲ್ಲಿ ಸೆ. 16, 17ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular