HomeLatest NewsBIG UPDATE : ಹಾಸನದಲ್ಲಿ 'ಗಣೇಶ ಮೆರವಣಿಗೆ' ವೇಳೆ ಟ್ರಕ್ ಹರಿದು ದುರಂತ : ಸಾವಿನ...

BIG UPDATE : ಹಾಸನದಲ್ಲಿ ‘ಗಣೇಶ ಮೆರವಣಿಗೆ’ ವೇಳೆ ಟ್ರಕ್ ಹರಿದು ದುರಂತ : ಸಾವಿನ ಸಂಖ್ಯೆ 9 ಕ್ಕೇರಿಕೆ, 10 ಮಂದಿ ಸ್ಥಿತಿ ಗಂಭೀರ.!

ಹಾಸನ : ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಇದುವರೆಗೆ 9 ಮಂದಿ ಸಾವನ್ನಪ್ಪಿದ್ದು, 10 ಮಂದಿ ಸ್ಥಿತಿ ಗಂಭೀರವಾಗಿದೆ.

ಬಳ್ಳಾರಿ ಮೂಲದ ಬಿಇ ವಿದ್ಯಾರ್ಥಿ ಪ್ರವೀಣ್ ಕುಮಾರ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 9 ಕ್ಕೇರಿಕೆಯಾಗಿದೆ.ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಈ ಘೋರ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಸಂತಾಪ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular