BIG NEWS : ರಾಜ್ಯದ ಜನತೆ ಗಮನಕ್ಕೆ : ‘ಜಾತಿ ಸಮೀಕ್ಷೆ’ಗೆ ಆನ್ ಲೈನ್’ನಲ್ಲಿ ಭಾಗವಹಿಸಲು ಈ ಸಂಖ್ಯೆಗೆ ಕರೆ ಮಾಡಿ.!

ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ನಡೆಯಲಿದೆ. 2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10 ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಸಮಾಜದಲ್ಲಿ ಅನೇಕ ಜಾತಿಗಳು ಇದ್ದು, ವೈರುಧ್ಯತೆಯಿಂದಾಗಿ ಕೂಡಿದ್ದು, ಅಸಮಾನತೆ ಈಗಲೂ ಇದೆ. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇಬೇಕು ಎಂದು ಹೇಳಿದ್ದರು. ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು, ಸಮಾನ ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಸುಮಾರು 2 ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ ಎಂದರು.
ಜಾತಿ ಸಮೀಕ್ಷೆಗೆ ಆನ್ ಲೈನ್ ನಲ್ಲೂ ಭಾಗವಹಿಸಬಹುದು.

ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.

ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read