HomeLatest Newsಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇಮಕಾತಿ ವಯೋಮಿತಿ ಸಡಿಲಿಕೆ ಸುಳಿವು ನೀಡಿದ ಪರಮೇಶ್ವರ್

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇಮಕಾತಿ ವಯೋಮಿತಿ ಸಡಿಲಿಕೆ ಸುಳಿವು ನೀಡಿದ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿ ಸಡಿಲಿಕೆಯ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸುಳಿವು ನೀಡಿದ್ದು, ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅನೇಕ ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ವಯೋಮಿತಿ ಸಡಿಲಿಕೆ ಬಗ್ಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ವಯೋಮಿತಿ ಏನಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಆಕಾಂಕ್ಷಿಗಳು ಎರಡರಿಂದ ಮೂರು ವರ್ಷ ವಯೋಮಿತಿ ಹೆಚ್ಚಳ ಮಾಡಿಕೊಡಲು ಬೇಡಿಕೆ ಇಟ್ಟಿದ್ದು, ಅನೇಕ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ. ವಯೋಮಿತಿ ಸಡಿಲಿಕೆ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಬೇರೆ ರಾಜ್ಯಗಳಲ್ಲಿ ವಯೋಮಿತಿ ಎಷ್ಟು ವರ್ಷ ಇದೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದ್ದು, ಪ್ರಸ್ತಾವನೆ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular