ನವದೆಹಲಿ: ಹಾಸನದ ಮೊಸಳೆಹೊಸಳ್ಳಿ ಬಳಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ 9 ಜನರು ಮೃತಪಟ್ಟಿದ್ದಾರೆ. ಘಟನೆ ಆಘಾತ ತಂದಿದೆ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬದವರಿಗೆ ದು:ಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಇದೇ ವೇಳೆ ಅಪಘಾತದಲ್ಲಿ ಮೃತಪಟ್ಟಿರುವವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ.