BREAKING : ಹಾಸನ ಗಣೇಶ ಮೆರವಣಿಗೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ.!

ನವದೆಹಲಿ : ಹಾಸನ ಗಣೇಶ ಮೆರವಣಿಗೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಕರ್ನಾಟಕದ ಹಾಸನದಲ್ಲಿ ನಡೆದ ಘಟನೆ ಹೃದಯ ವಿದ್ರಾವಕ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ನಾನು ಭಾವಿಸುತ್ತೇನೆ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಭಯಾನಕ ಘಟನೆ ನಡೆದಿದೆ. ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್ ನುಗ್ಗಿದೆ. ಪರಿಣಾಮ ಎಂಟು 9 ಮಂದಿ ಸಾವನ್ನಪ್ಪಿದರು ಮತ್ತು ಹಲವರು ಜನ ಗಂಭೀರವಾಗಿ ಗಾಯಗೊಂಡರು.

ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ರಾತ್ರಿ 8 ರಿಂದ 8:45 ರ ನಡುವೆ ಈ ದುರಂತ ಸಂಭವಿಸಿದೆ, ಆಗ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಗಣೇಶ ಹಬ್ಬದ ಅಂತಿಮ ವಿಧಿವಿಧಾನಗಳಲ್ಲಿ ಭಾಗವಹಿಸುತ್ತಿದ್ದರು. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read