ವಿಶ್ವ ಕೌಶಲ್ಯ ಸ್ಪರ್ಧೆ 2026 : ಹೆಸರು ನೋಂದಾಯಿಸಲು ಅವಕಾಶ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಜಾಗತಿಕ ಮಟ್ಟದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು 2026 ರಲ್ಲಿ ಚೀನಾದ ಶಾಂಘೈನಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆ ಏರ್ಪಡಿಸಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.

ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ರಾಷ್ಟçಗಳಿಂದ 1 ಸಾವಿರಕ್ಕೂ ಹೆಚ್ಚು 16 ರಿಂದ 25 ವರ್ಷದೊಳಗಿನ ಯುವಜನತೆ 63 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಟತೆಯ ಕಾರ್ಯಕ್ರಮವಾಗಿದೆ.

ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಿ ಪದಕ ಗೆಲ್ಲುವ ಅವಕಾಶವನ್ನು ಒದಗಿಸಲು, 2025-26ನೇ ಸಾಲಿನಲ್ಲಿ “ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025” ಸ್ಪರ್ಧೆಯನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟಗಳಲ್ಲಿ ಆಯೋಜಿಸಲು ಯೋಜನೆ ರೂಪಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಆನ್‌ಲೈನ್ ವೆಬ್‌ಸೈಟ್ https://www.skillindiadigital.gov.in/home ಗೆ ಭೇಟಿ ನೀಡಿ ಸೆಪ್ಟೆಂಬರ್ 30 ರೊಳಗೆ ಸ್ಪರ್ಧೆಗೆ ಹೆಸರು ನೋಂದಾಯಿಸಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು 63 ಕೌಶಲ್ಯಗಳಲ್ಲಿ ಭಾಗವಹಿಸಬಹುದಾಗಿದೆ. ಕ್ರಮ ಸಂಖ್ಯೆ 01 ರಿಂದ 50 ಕೌಶಲ್ಯಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು 01.01.2004 ರಂದು ಅಥವಾ ನಂತರದಲ್ಲಿ ಜನಿಸಿದವರಾಗಿರಬೇಕು. ಕ್ರಮ ಸಂಖ್ಯೆ 51 ರಿಂದ 63 ಕೌಶಲ್ಯಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು 01.01.2001 ರಂದು ಅಥವಾ ನಂತರದಲ್ಲಿ ಜನಿಸಿದವರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ನೆಲಮಹಡಿ ಸಿ ಬ್ಲಾಕ್‌ನ ಕಚೇರಿ ಸಂಖ್ಯೆ 17 ರ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಅಥವಾ ಮೊ.9606492216, 7204237323 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read