ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹಾರಾಡಲು ಸಿದ್ಧತೆ ನಡೆಸಿದ್ದ ಏರ್ ಬಲೂನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಮಧ್ಯಪ್ರದೇಶದ ಮಂದಸೋರ್ ನಲ್ಲಿ ಈ ಘಟನೆ ನಡೆದಿದೆ. ಮಧ್ಯಪ್ರದೇಶದ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್ ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಈ ವೇಳೆ ಬಲೂನ್ ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಗಧಗನೆ ಬೆಂಕಿ ಹೊತ್ತಿ ಉರಿದಿದೆ. ತಕ್ಷಣ ಭದರ್ತಾ ಸಿಬ್ಬಂದಿ ಮುಖ್ಯಮಂತ್ರಿಗಳನ್ನು ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅದೃಷ್ಟವಶಾತ್ ಸಿಎಂ ಮೋಹನ್ ಯಾದಾವ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಟ್ ಬಲ್ನ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ನಿಯಂತ್ರಣಕ್ಕೆ ತೆಗೆದುಕೊಂಡು ಬೆಂಕಿ ನಂದಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.