ಹಾಸನ: ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನರು ಸಾವನ್ನಪ್ಪಿರುವ ಘಟನೆ ಸಂಬಂಧಿಸಿದಂತೆ ತೀವ್ರ ಸಂತಾಪ ಸೂಚಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಮೃತರ ಕುಟುಂಬಕ್ಕೆ ಹೆಚ್ಚಿನ ಪರುಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಹಳ್ಳಿಯವರು. ಬಡ ಕುಟುಂಬದವರು. 10 ಲಕ್ಷ ಪರಿಹಾರ ಕೊಟ್ಟರೆ ಒಳ್ಳೆಯದು ಎಂದರು.
ರಾಜ್ಯ ಸರ್ಕಾರ ಈಗಾಗಲೇ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದೆ. 10 ಲಕ್ಷ ರೂಪಾಯಿಯಾದರೂ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ನಾನೂ ಹಾಸನಕ್ಕೆ ಹೋಗುತ್ತಿದ್ದೇನೆ. ಡಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಸರ್ಕಾರ ಗಾಯಾಳುಗಳನ್ನು ಬೆಂಗಳೂರು, ಮೈಸೂರಿಗೆ ಕರೆದೊಯ್ದು ಚಿಕಿತ್ಸೆ ನೀಡಬೇಕು ಎಂದರು.