BIG NEWS: ಮೃತರ ಕುಟುಂಬಕ್ಕೆ ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲಷ್ಟೇ: ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೃತರು ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿರುವುದರಿಂದ ಸರ್ಕಾರ ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಲಾಗಿದೆ ಎಂದರು.

ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read