HomeLatest NewsBIG NEWS : ಮಣಿಪುರದಲ್ಲಿ ಗಲಭೆ ನಡೆಯುವ ವೇಳೆ ಹೋಗಿ ಜನರ ಕಷ್ಟ ಆಲಿಸಬೇಕಿತ್ತು...

BIG NEWS : ಮಣಿಪುರದಲ್ಲಿ ಗಲಭೆ ನಡೆಯುವ ವೇಳೆ ಹೋಗಿ ಜನರ ಕಷ್ಟ ಆಲಿಸಬೇಕಿತ್ತು : ಪ್ರಧಾನಿ ಮೋದಿಗೆ CM ಸಿದ್ದರಾಮಯ್ಯ ಟಾಂಗ್.!

ಮಣಿಪುರ : ಮಣಿಪುರದಲ್ಲಿ ಗಲಭೆ ನಡೆಯುವ ವೇಳೆ ಜನರ ಕಷ್ಟ ಆಲಿಸಬೇಕಿತ್ತು , ಈಗ ಹೋಗುತ್ತಿದ್ದಾರೆ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಗಲಭೆ ಆರಂಭವಾಗಿ ಮೂರು ವರ್ಷಗಳ ನಂತರ ಪ್ರಧಾನಮಂತ್ರಿ Narendra Modi ಅವರು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಮಣಿಪುರದಲ್ಲಿ ಗಲಭೆ ನಡೆಯುವ ಸಂದರ್ಭದಲ್ಲಿ ಪ್ರಧಾನಿಗಳು ಭೇಟಿನೀಡಿ, ಜನರ ಕಷ್ಟ ಆಲಿಸಬೇಕಿತ್ತು. ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ವಿರೋಧಪಕ್ಷದವರ ಒತ್ತಡದಿಂದ ಈಗ ಮಣಿಪುರಕ್ಕೆ ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರು ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಕಾರಣಕ್ಕಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿಯವರು ಪ್ರಚೋದನಾಕಾರಿಯಾದ ಭಾಷಣ ಮಾಡಿದರೆ ಸರ್ಕಾರ ಏನು ಮಾಡಬೇಕು? ಕೈಕಟ್ಟಿ ಕೂರಲು ಆಗುತ್ತದೆಯಾ? ಸಮಾಜದ ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ. ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ, ಮಾಡುವುದು ಇಲ್ಲ. ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular