BREAKING: ಹಾಸನ ದುರಂತ ಪ್ರಕರಣ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಜೆಡಿಎಸ್

ಹಾಸನ: ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 9 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಜೆಡಿಎಸ್ ಪರಿಹಾರ ಘೋಷಿಸಿದೆ.

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಹಾಸನದಲ್ಲಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವವರಿಗೆ 25 ಸಾವಿರ ಪರಿಹಾರ ಘೋಷಿಸಿದ್ದಾರೆ.

ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 20 ಸಾವಿರ ಪರಿಹಾರ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 15 ಸಾವಿರ ಘೋಷಿಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದು, ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read