ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಎರಡು ಸ್ಥಳಗಳಲ್ಲಿ ಪ್ಯಾಲೇಸ್ತೀನ್ ಧ್ವಜ ಹಾರಿಸಲಾಗಿದೆ. ಭದ್ರಾವತಿಯ ಹೊಳೆಹೊನ್ನೂರು ಸರ್ಕಲ್ ಮತ್ತು ಪದ್ಮಾ ನಿಲಯ ಹೋಟೆಲ್ ಬಳಿ ಘಟನೆ ನಡೆದಿದೆ.
ಸೆಪ್ಟೆಂಬರ್ 8 ರಂದು ಬೆಳಗ್ಗೆ 11 ಘಂಟೆ ಸುಮಾರಿಗೆ ಪ್ಯಾಲೇಸ್ತೀನ್ ಧ್ವಜ ಹಾರಿಸಲಾಗಿದೆ. ಈದ್ ಮಿಲಾದ್ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಬೈಕ್ ಮೇಲೆ ಪ್ಯಾಲೇಸ್ತೀನ್ ಧ್ವಜ ಹಾರಿಸಿದ್ದಾನೆ ಎಂದು ಹೇಳಲಾಗಿದ್ದು, ಸೆಪ್ಟೆಂಬರ್ 11ರಂದು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಹಿಂದೂ ಪರ ಸಂಘಟನೆಯ ಮುಖಂಡ ದೇವರಾಜ್ ದೂರು ನೀಡಿದ್ದಾರೆ. ದೂರುದಾರ ದೇವರಾಜ್ ಗೆ ಪೊಲೀಸರು ನೋಟಿಸ್ ನೀಡಿ ಸೂಕ್ತ ಮಾಹಿತಿ, ಸಾಕ್ಷ್ಯ ನೀಡಿದರೆ ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನೀಡಿದ್ದಾರೆ.