ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ದಂಡ ಪಾವತಿಸಲು ಶೇಕಡ 50ರಷ್ಟು ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ. 22 ದಿನದಲ್ಲಿ 106 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ.
37,86,123 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಇತ್ಯರ್ಥವಾಗಿವೆ. ಆಗಸ್ಟ್ 23 ರಿಂದ ಸೆ. 12ರ ವರೆಗೆ ಶೇಕಡ 50ರಷ್ಟು ರಿಯಾಯಿತಿಯಡಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಅವಕಾಶ ನೀಡಲಾಗಿತ್ತು. ವಾಹನ ಸವಾರರು ಈ ಸೌಲಭ್ಯವನ್ನು ಆನ್ಲೈನ್ ಮತ್ತು ಆಫ್ಲೈನ್ ನಲ್ಲಿ ತಂಡದ ಬಾಕಿ ಮೊತ್ತ ಪಾವತಿಸಿದ್ದಾರೆ ಒಟ್ಟು ನೂರಾರು ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ.