ಏಷ್ಯಾ ಕಪ್ ಟಿ-20 ಟೂರ್ನಿಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಹಲ್ಗಾಂನಲ್ಲಿ ಉಗ್ರರ ದಾಳಿ ನಂತರ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ.
ಈ ಪಂದ್ಯವನ್ನು ಬಹಿಷ್ಕರಿಸಬೇಕು ಎಂದು ಒತ್ತಾಯಿಸಲಾಗಿದೆ. ಭಾರತ- ಪಾಕಿಸ್ತಾನ ಪಂದ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪಹಾಲ್ಗಾಂನಲ್ಲಿ ಪಾಕಿಸ್ತಾನ ಉಗ್ರರ ದಾಳಿ ಮರೆಯುವ ಮೊದಲೇ ಪಾಕಿಸ್ತಾನದೊಂದಿಗೆ ಪಂದ್ಯವನ್ನು ಆಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ವಿರೋಧದ ಕಾರಣ ಈ ಪಂದ್ಯದ ಟಿಕೆಟ್ ಗೆ ಬೇಡಿಕೆ ಕುಸಿತವಾಗಿದೆ. ಇನ್ನು ಯಾರೂ ಪಂದ್ಯವನ್ನು ನೋಡಬೇಡಿ ಎಂದು ಪಹಲ್ಗಾಂ ಉಗ್ರರ ದಾಳಿಯಲ್ಲಿ ಮಡಿದ ಕಾನ್ಪುರದ ಶುಭಂ ಅವರ ಪತ್ನಿ ಐಶಾನ್ಯ ಕರೆ ನೀಡಿದ್ದಾರೆ.
ಕಳೆದ ಏಪ್ರಿಲ್ ನಲ್ಲಿ ಪಹಲ್ಗಾಂನಲ್ಲಿ ನಡೆದ ಉಗ್ರರ ಭೀಕರ ದಾಳಿಯ ನಂತರ ಪಾಕಿಸ್ತಾನ ವಿರುದ್ಧ ಎಲ್ಲಾ ರೀತಿಯ ಸಂಬಂಧ ಕಳೆದುಕೊಳ್ಳಲು ವ್ಯಾಪಕ ಒತ್ತಾಯ ಕೇಳಿ ಬಂದಿತ್ತು. ಕೇಂದ್ರ ಸರ್ಕಾರ ಅನುಮತಿ ನೀಡಿದ್ದರಿಂದ ಪಾಕಿಸ್ತಾನ ವಿರುದ್ಧ ಆಡಲು ಭಾರತ ಸಜ್ಜಾಗಿದೆ ಭಾನುವಾರ ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಪಯ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ ಎಂಟು ಗಂಟೆಗೆ ಪಂದ್ಯ ಆರಂಭವಾಗಲಿದೆ.