HomeLatest Newsಒಂದೂವರೆ ತಿಂಗಳ ಮಗು ಕದ್ದೊಯ್ದ ಮಹಿಳೆ: 6 ಗಂಟೆಯಲ್ಲೇ ತಾಯಿ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿ

ಒಂದೂವರೆ ತಿಂಗಳ ಮಗು ಕದ್ದೊಯ್ದ ಮಹಿಳೆ: 6 ಗಂಟೆಯಲ್ಲೇ ತಾಯಿ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿ

ಬಳ್ಳಾರಿ: ಜನನ ಪ್ರಮಾಣ ಪತ್ರ ಮಾಡಿಸಿಕೊಡುವುದಾಗಿ ನಂಬಿಸಿ ಒಂದೂವರೆ ತಿಂಗಳ ಮಗುವನ್ನು ಕದ್ದೊಯ್ದ ಅಪರಿಚಿತ ಮಹಿಳೆಯ ಜಾಡು ಹಿಡಿದ ಪೊಲೀಸರು ಘಟನೆ ನಡೆದ ಆರು ಗಂಟೆಯಲ್ಲೇ ಮಗುವನ್ನು ತಾಯಿಯ ಮಡಿಲಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಳ್ಳಾರಿ ತಾಲೂಕಿನ ಬೆಣಕಲ್ಲು ಗ್ರಾಮದ ಶ್ರೀದೇವಿ ಸುರೇಶ್ ಅವರು ತಮ್ಮ ಗಂಡು ಮಗುವಿನೊಂದಿಗೆ ಶುಕ್ರವಾರ ಜಿಲ್ಲಾಸ್ಪತ್ರೆಗೆ ಆಗಮಿಸಿದ್ದಾರೆ. ಈ ವೇಳೆ ಬುರ್ಖಾಧಾರಿ ಮಹಿಳೆಯೊಬ್ಬರು ಪರಿಚಯಿಸಿಕೊಂಡು ಮಗುವಿನ ಜನನ ಪ್ರಮಾಣ ಪತ್ರ ಮಾಡಿಸಿ ಕೊಡುವುದಾಗಿ ನಂಬಿಸಿ ಶ್ರೀದೇವಿ ಅವರನ್ನು ಪಾಲಿಕೆಯ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. ಶ್ರೀದೇವಿಯವರು ಶೌಚಾಲಯಕ್ಕೆ ಹೋಗುವುದಾಗಿ ಹೇಳಿ ಅಪರಿಚಿತ ಮಹಿಳೆ ಕೈಗೆ ಮಗು ಕೊಟ್ಟಿದ್ದಾರೆ. ಆದರೆ ಅವರು ವಾಪಸ್ ಬರುವಷ್ಟರಲ್ಲಿ ಮಹಿಳೆ ಮಗುವಿನೊಂದಿಗೆ ನಾಪತ್ತೆಯಾಗಿದ್ದಳು.

ಇದರಿಂದ ಆತಂಕಗೊಂಡ ಶ್ರೀದೇವಿ ಅವರು ಬ್ರೂಸ್ ಪೇಟೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಘಟನೆ ನಡೆದ ಆರು ಗಂಟೆಯೊಳಗೆ ಮಗುವನ್ನು ತಾಯಿ ಮಡಿಲು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular