ಬೆಳಗಾವಿ: ಬೆಳಗಾವಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಉಪಹಾರ ಸೇವಿಸಿ ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಶುಕ್ರವಾರ ವಸತಿ ಶಾಲೆಯಲ್ಲಿ ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು ಹಾಗೂ ಚಹಾ ನೀಡಲಾಗಿತ್ತು. ಇದನ್ನು ಸೇವಿಸಿದ್ದ 77 ಮಕ್ಕಳು ತೀವ್ರ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದರು.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಓರ್ವ ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಾಗಿತ್ತು. ಇದೀಗ ಪ್ರಕರಣಕ್ಕೆ ಸಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯಪಾಲಕ ಶಿವಪ್ಪ ಡುಕುರೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಲತಾ ಅಮಾನತುಗೊಂಡವರು.