ಶಿವಮೊಗ್ಗ: ತಂದೆ- ತಾಯಿ ಮಗುವಿಗೆ ಜನ್ಮ ನೀಡಿದರೆ ಜೀವನಕ್ಕೆ ಅಗತ್ಯವಿರುವ ಮಾರ್ಗದರ್ಶನ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಮಾರ್ಗದರ್ಶನ ನೀಡುವುದು ಶಿಕ್ಷಕರಿಂದ ಸಾಧ್ಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 25000 ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ದೊರೆಯಬೇಕೆಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. 800 ಕೆಪಿಎಸ್ ಹಾಗೂ 5,000 ದ್ವಿಭಾಷಾ ಶಾಲೆ ಮಂಜೂರು ಮಾಡಲಾಗಿದೆ. 18 ಸಾವಿರ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದೇಶದ ಪ್ರಗತಿಗೆ ಶಿಕ್ಷಣ ಮುಖ್ಯವಾಗಿದ್ದು, ಸಮಗ್ರ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ. ಪಠ್ಯ ಶಿಕ್ಷಣಕ್ಕೆ ತೊಂದರೆಯಾಗದಂತೆ ಕೌಶಲ್ಯ ಅಭಿವೃದ್ಧಿಗೂ ಒತ್ತು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.