HomeLatest Newsಸೌಜನ್ಯಾ ಕೊಂದಿದ್ದು ಮಾವ ವಿಠಲ್ ಗೌಡ ಎಂದು ಆರೋಪಿಸಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ...

ಸೌಜನ್ಯಾ ಕೊಂದಿದ್ದು ಮಾವ ವಿಠಲ್ ಗೌಡ ಎಂದು ಆರೋಪಿಸಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ದೂರು

ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ವೆಂಕಪ್ಪ ಕೋಟ್ಯಾನ್ ಎಂಬುವರು ದೂರು ನೀಡಿದ್ದಾರೆ.

ಸೌಜನ್ಯಾಳನ್ನು ಆಕೆಯ ಮಾವ ವಿಠಲ್ ಗೌಡ ಕೊಂದಿದ್ದಾಗಿ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದ್ದರು. ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧವೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ವೆಂಕಪ್ಪ ಕೋಟ್ಯಾನ್ ದೂರು ನೀಡಿದ್ದು, ಸೌಜನ್ಯಾಳಿಗೆ ನ್ಯಾಯ ಒದಗಿಸುವ ಹೋರಾಟದ ದಾರಿಯನ್ನು ತಪ್ಪಿಸಲು ಸ್ನೇಹಮಯಿ ಕೃಷ್ಣ ದುರುದ್ದೇಶ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ರೀತಿಯ ಹೇಳಿಕೆಯ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಬೇಕು. ಸ್ನೇಹಮಯಿ ಕೃಷ್ಣ ಅವರನ್ನು ಕರೆಸಿ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular