ಹಾಸನ ಅಪಘಾತ ಪ್ರಕರಣ: ಹೆಚ್ಚಿನ ಪರಿಹಾರ ಕೊಡದಿದ್ದರೆ ರಾಜೀನಾಮೆ ಕೊಟ್ಟು ಹೋಗಿ: ಸಿಎಂಗೆ ಶೋಭಾ ಕರಂದ್ಲಾಜೆ ಆಗ್ರಹ

ಶಿವಮೊಗ್ಗ: ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 10 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಕೇವಲ 5 ಲಕ್ಷ ಪರಿಹಾರ ಘೋಷಿಸಿದೆ. ಮೃತ ಕುಟುಂಭದ ನೋವು ಕಾಣುತ್ತಿಲ್ಲವೇ? ಹೆಚ್ಚಿನ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ರಾಜೀನಾಮೆ ಕೊಟ್ಟು ಹೋಗಿ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಹಿಂದೂ ವಿರೋಧ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣಿತ್ತಿದೆ. ಆದರೆ ಬೇರೆ ಸಮುದಾಯಗಳ ನೋವು ಕಾಣುತ್ತಿಲ್ಲ. ಕೇರಳದ ಆನೆಯಿಂದ ಸಾವನ್ನಪ್ಪಿದವರಿಗೆ ಪರಿಹಾರ ನೀಡುತ್ತಾರೆ. ಆರ್ ಸಿಬಿ ವಿಜಯೋತ್ಸವದಲಿ ಸತ್ತವರಿಗೆ ಹೆಚ್ಚಿನ ಪರಿಹಾರ ಕೊಡುತ್ತಾರೆ. ಹಾಸನದಲ್ಲಿ ಗಣೇಶ ಮೆರವಣಿಗೆಯಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬಡ ಕುಟುಂಬದವರಿಗೆ ಹೆಚ್ಚಿನ ಪರಿಹಾರ ನೀಡಲು ಯಾಕೆ ಆಗುತ್ತಿಲ್ಲ? ಎಂದು ಪ್ರಶ್ನಿಸಿದರು.

ಮದ್ದೂರಿನಲ್ಲಿ ಅನಧಿಕ್ರ‍ಿತವಾಗಿ ಮಸೀದಿ ನಿರ್ಮಿಸಲಾಗಿದೆ. ಆದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಗಲಾಟೆಗಳಿಗೆ ಸಿಎಂ ಸಿದ್ದರಾಮಯ್ಯ ಅವರ ದುರಹಂಕಾರವೇ ಕಾರಣ ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read