ಶಿವಮೊಗ್ಗ: ದಿನಾಂಕ: 15-09-2025 ರಂದು ಶಿವಮೊಗ್ಗ ನಗರದಲ್ಲಿ ಈದ್ – ಮಿಲಾದ್ ಮೆರವಣಿಗೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಂದೋಬಸ್ತ್ ಕರ್ತವ್ಯಕ್ಕೆ 1 ಪೊಲೀಸ್ ಅಧೀಕ್ಷಕರು, 3 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 17 ಪೊಲೀಸ್ ಉಪಾಧೀಕ್ಷಕರು, 52 ಪೋಲಿಸ್ ನಿರೀಕ್ಷಕರು, 38 ಪೊಲೀಸ್ ಉಪ ನಿರೀಕ್ಷಕರು, 77 ಸಹಾಯಕ ಪೊಲೀಸ್ ನಿರೀಕ್ಷಕರು, 2000 ಪೊಲೀಸ್ ಹೆಡ್ ಕಾನ್ಸ್ ಟೆಬಲ್ ಮತ್ತು ಪೊಲೀಸ್ ಕಾನ್ಸ್ ಟೆಬಲ್ ಗಳು, 1000 ಗೃಹರಕ್ಷಕ ದಳ ಸಿಬ್ಬಂದಿಗಳು, 1 RAF ತುಕಡಿ, 1 SAF ತುಕಡಿ, 8 DAR ತುಕಡಿ, 1 QRT ತುಕಡಿ ಮತ್ತು 10 KSRP ತುಕಡಿಗಳನ್ನು ನಿಯೋಜಿಸಲಾಗಿರುತ್ತದೆ.
ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಅವರ ನೇತೃತ್ವದಲ್ಲಿ ಇಂದು ಸಂಜೆ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಕವಾಯತು ಮೈದಾನದಲ್ಲಿ ಬ್ರೀಫಿಂಗ್ ಸಭೆ ನಡೆಸಿ, ಬಂದೋಬಸ್ತ್ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ನಂತರ ಮಿಥುನ್ ಕುಮಾರ್ ಜಿ.ಕೆ. ಆವರ ನೇತೃತ್ವದಲ್ಲಿ, ಬಂದೋಬಸ್ತ್ ಗೆ ನೇಮಕವಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಸಶಸ್ತ್ರ ಪೊಲೀಸ್ ಬಲದ ತುಕಡಿಗಳು ಹಾಗೂ ಗೃಹರಕ್ಷಕ ಸಿಬ್ಬಂದಿಗಳ ತಂಡದೊಂದಿಗೆ ಶಿವಮೊಗ್ಗ ನಗರದಲ್ಲಿ ಪೊಲೀಸ್ ಪಥ ಸಂಚಲನ(ರೂಟ್ ಮಾರ್ಚ್) ನಡೆಸಲಾಯಿತು.