ಕಲಬುರಗಿ: ಜೇವರ್ಗಿ ಪ್ರವೇಶಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಲಾಗಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಪ್ರವೇಶಿಸಲು ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ವಿಧಿಸಿ ಕಲಬುರಗಿ ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ ಆದೇಶ ಹೊರಡಿಸಿದ್ದಾರೆ. ಜೇವರ್ಗಿ ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆ ನಡೆಯಲಿದೆ. ಶೋಭಾ ಯಾತ್ರೆಗೆ ಚಾಲನೆ ನೀಡಲು ಪ್ರಮೋದ್ ಮುತಾಲಿಕ್ ಅವರು ಬರಬೇಕಿತ್ತು. ಪ್ರಚೋದನಾಕಾರಿ ಭಾಷಣ, ಕೋಮು ದ್ವೇಷ ಭಾಷಣದ ಹಿನ್ನೆಲೆಯಲ್ಲಿ ಅವರಿಗೆ ನಿರ್ಬಂಧ ವಿಧಿಸಲಾಗಿದೆ. ಜೇವರ್ಗಿ ತಾಲೂಕು ಪ್ರವೇಶಿಸಲು ಮುತಾಲಿಕ್ ಅವರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.