HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲೂ ಸ್ಯಾಟ್ ಲೈಟ್ ಹೃದ್ರೋಗ ಕೇಂದ್ರ ಆರಂಭ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲೂ ಸ್ಯಾಟ್ ಲೈಟ್ ಹೃದ್ರೋಗ ಕೇಂದ್ರ ಆರಂಭ

ಮೈಸೂರು: ಜನಸಂಖ್ಯೆಗೆ ಅನುಗುಣವಾಗಿ ಹೃದ್ರೋಗ ಚಿಕಿತ್ಸೆಯನ್ನು ವಿಸ್ತರಿಸುವ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿಯೂ ಸ್ಯಾಟ್ ಲೈಟ್ ಹೃದ್ರೋಗ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಬಿ. ದಿನೇಶ್ ತಿಳಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸುತ್ತೂರು ಶಾಖಾ ಮಠದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.

2040ರ ವೇಳೆಗೆ ಜನಸಂಖ್ಯೆ ಶೇಕಡ 15ರಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯು ಅಗತ್ಯ ಮೂಲ ಸೌಕರ್ಯ ಹೆಚ್ಚಿಸಿಕೊಂಡು ಸೇವೆಯನ್ನು ವಿಸ್ತರಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಗೊಂದು ಸ್ಯಾಟ್ ಲೈಟ್ ಹೃದ್ರೋಗ ಕೇಂದ್ರಗಳನ್ನು ಆರಂಭಿಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದಿಂದ ಅನುಮೋದನೆ ಪಡೆದು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಾದ್ಯಂತ ಡಾ. ಪುನೀತ್ ರಾಜಕುಮಾರ್ ಯೋಜನೆ ಜಾರಿಯಲ್ಲಿದ್ದು, ತಾಲೂಕು ಹಂತದಲ್ಲಿಯೇ ಹೃದ್ರೋಗಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕು ಮಟ್ಟದಲ್ಲಿಯೇ ಗೋಲ್ಡನ್ ಅವರ್ ನಲ್ಲಿ ಎರಡು ಚುಚ್ಚುಮದ್ದುಗಳನ್ನು ನೀಡುವುದರಿಂದ ಸಾವಿರಾರು ಹೃದ್ರೋಗಿಗಳ ಜೀವ ಉಳಿದಿದೆ ಎಂದು ಹೇಳಿದ್ದಾರೆ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular