ಹಾವೇರಿ: ಸರ್ಕಾರಿ ನೌಕರರಿಗೆ ಒಪಿಎಸ್ ಜಾರಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ರಾಣೆಬೆನ್ನೂರಿನಲ್ಲಿ ಏರ್ಪಡಿಸಿದ್ದ ರಾಜಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಮುಂದಿನ ದಿನಗಳಲ್ಲಿ ಒಪಿಎಸ್ ಜಾರಿ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಇಲಾಖೆಯಡಿ ರಾಜ್ಯಾದ್ಯಂತ 1.16 ಕೋಟಿ ಮಕ್ಕಳು ಅಧ್ಯಯನ ನಡೆಸುತ್ತಿದ್ದು, 56 ಸಾವಿರ ಸರ್ಕಾರಿ ಶಾಲಾ, ಕಾಲೇಜುಗಳಿವೆ. ಶಿಕ್ಷಣ ಇಲಾಖೆ ನಿರ್ವಹಣೆ ತುಂಬಾ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ
ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ಉದ್ದೇಶದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.