HomeLatest NewsGOOD NEWS : ರಾಜ್ಯ ಸರ್ಕಾರದಿಂದ ನೇಕಾರರರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ 5000...

GOOD NEWS : ರಾಜ್ಯ ಸರ್ಕಾರದಿಂದ ನೇಕಾರರರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ 5000 ರೂ. ಪಡೆಯಲು ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕವಾಗಿ ರೂ.5,000 ಗಳನ್ನು ನೀಡಲು ನೇಕಾರರ ಸಮ್ಮಾನ್ ಯೋಜನೆಯಡಿ ಈಗಾಗಲೇ 2025-26 ನೇ ಸಾಲಿಗೆ ನೊಂದಾಯಿತರಾಗಿರುವ ನೇಕಾರರಿಂದ ಹಾಗೂ ನೇಕಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ಕೈಮಗ್ಗ/ ವಿದ್ಯುತ್ ಮಗ್ಗ ನೇಕಾರರಿಂದ ಹೊಸದಾಗಿ ಅರ್ಜಿಗಳನ್ನು ಪಡೆದು ಅರ್ಹರಿರುವ ನೇಕಾರರ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟನಲ್ಲಿ ಅಪ್ಲೋಡ್ ಮಾಡಲ ತಿಳಿಸಲಾಗಿರುತ್ತದೆ.

ಅದರಂತೆ 2024-25 ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಈಗಾಗಲೇ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಂದ ಹಾಗೂ ಕೈಮಗ್ಗ / ವಿದ್ಯುತ್ ಮಗ್ಗ ನೇಯ್ಗೆಗೆ ಸಂಬAದಿಸಿದ ಇತರೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ನೇಕಾರರಿಂದ / ನೇಕಾರ ಸಹಕಾರ ಸಂಘಗಳ ಮೂಲಕ ಅರ್ಜಿ ಪಡೆಯಲಾಗುತ್ತಿದ್ದು, ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಈ ಕೆಳಕಂಡ ದಾಖಲಾತಿಗಳೊಂದಿಗೆ ನೇಕಾರ ಸಹಕಾರ ಸಂಘಗಳ ಮೂಲಕ ಅಥವಾ ನೇರವಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಎಂ. ರಸ್ತೆ, ಹೆಚ್.ಡಿ.ಸಿ.ಸಿ ಬ್ಯಾಂಕ್ ಹತ್ತಿರ, ಡೈರಿ ಸರ್ಕಲ್, ಹಾಸನ ಕಚೇರಿಗೆ ಸೆ.25 ರೊಳಗಾಗಿ ಸಲ್ಲಿಸುವುದು.

ದಾಖಲಾತಿಗಳು: ಆಧಾರ ಕಾರ್ಡ, ರೇಷನ್ ಕಾರ್ಡ, ನೇಕಾರ ಸಮ್ಮಾನ್ ಐ.ಡಿ/ಪೆಹಚಾನ್ ಕಾರ್ಡ್, ಆದಾರ್ (ಓPಅI) ಲಿಂಕ್ ಬ್ಯಾಂಕ್ ಪಾಸ್ ಬುಕ್ ಪ್ರತಿ, ಕೈಮಗ್ಗ/ವಿದ್ಯುತ್ ಮಗ್ಗ ನೇಕಾರಿಕೆ ಮಾಡುತ್ತಿರುವ ಪೋಟೋ, ಕೈಮಗ್ಗ/ವಿದ್ಯುತ್ ಮಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೂಲಿ ನೇಕಾರರ ಮಜೂರಿ ಪಾವತಿ ರಸೀದಿಯನ್ನು ಸಲ್ಲಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular