ಚಾಮರಾಜನಗರ: ಜಮೀನಿಗೆ ನುಗ್ಗಿ ಹಲ್ಲೆ ನಡೆಸಿದ ಆರೋಪದಲ್ಲಿ 15 ಜನ ಅರಣ್ಯ್ ಇಲಾಖೆ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ರೈತ ಮಹಿಳೆ ಕಮಲಮ್ಮ ನೀಡಿದ ದೂರಿನ ಮೇರೆಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹುಲಿ ಸೆರೆಹಿಡಿಯದ್ದಕ್ಕೆ ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಕಳೆದವಾರ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ಘಟನೆ ನಡೆದಿತ್ತು.
ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಐವರು ರೈತರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ರೈತ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ 15 ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.