BREAKING: ಬೆಳ್ಳಂಬೆಳಗ್ಗೆ ಎನ್ ಕೌಂಟರ್ ನಲ್ಲಿ 1 ಕೋಟಿ ರೂ. ಬಹುಮಾನ ಹೊಂದಿದ್ದ ಸಹದೇವ್ ಸೊರೆನ್ ಸೇರಿ 3 ನಕ್ಸಲರ ಹತ್ಯೆ

ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ಮಾವೋವಾದಿ ಸೇರಿದಂತೆ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.

ನಿಷೇಧಿತ ಸಿಪಿಐ (ಮಾವೋವಾದಿ) ನ ಸಹದೇವ್ ಸೊರೆನ್ ತಂಡ ಮತ್ತು ಭದ್ರತಾ ಪಡೆಗಳ ನಡುವೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಗೋರ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಟಿತ್ರಿ ಅರಣ್ಯದಲ್ಲಿ ಈ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯ ಸಮಯದಲ್ಲಿ 1 ಕೋಟಿ ರೂ. ಬಹುಮಾನ ಹೊಂದಿದ್ದ ಸಹದೇವ್ ಸೊರೆನ್ ಮತ್ತು ಇತರ ಇಬ್ಬರು ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.

ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಾರ್ಖಂಡ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರನ್ನು ಹತ್ಯೆ ಮಾಡಿ ಮೂರು ಎಕೆ-47 ರೈಫಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ತಟಸ್ಥರಾದವರಲ್ಲಿ ಸಹದೇವ್ ಸೊರೆನ್(ಕೇಂದ್ರ ಸಮಿತಿ ಸದಸ್ಯರಿಗೆ 1 ಕೋಟಿ ರೂ. ಬಹುಮಾನ), ರಘುನಾಥ್ ಹೆಂಬ್ರಾಮ್(ವಿಶೇಷ ಪ್ರದೇಶ ಸಮಿತಿ ಸದಸ್ಯರಿಗೆ 25 ಲಕ್ಷ ರೂ. ಬಹುಮಾನ), ಮತ್ತು ವೀರ್ಸೆನ್ ಗಂಜು(ವಲಯ ಸಮಿತಿ ಸದಸ್ಯರಿಗೆ 10 ಲಕ್ಷ ರೂ. ಬಹುಮಾನ) ಸೇರಿದ್ದಾರೆ. ಸೋಮವಾರ ಮುಂಜಾನೆ ಹಜಾರಿಬಾಗ್‌ ನ ಗೋರ್ಹಾರ್ ಪ್ರದೇಶದ ಪಂಟಿತ್ರಿ ಅರಣ್ಯದಲ್ಲಿ ಬೆಳಿಗ್ಗೆ 4.20 ರ ಸುಮಾರಿಗೆ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಸಿಆರ್‌ಪಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read