ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಬೈಕ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೇವನಹಳ್ಳಿಯ ಆವತಿ-ಕೊಡಗುರ್ಕಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ವಿನೋದ್ ಕುಮಾರ್ (22) ಹಾಗೂ ನಿಖಿಲ್ (7) ಮೃತ ದುರ್ದೈವಿಗಳು. ಗೂಡ್ಸ್ ಚಾಲಕನ ಅಜಾಗರೂಕತೆಯೇ ಅಪಘಾತ ಕಾರಣ ಎಂದು ತಿಳಿದುಬಂದಿದೆ.
ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.