ಶಿವಮೊಗ್ಗ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಮಲಗೊಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹೇಶ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮೃತ ಯುವಕ ಮೆಡಿಕಲ್ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.