ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ನಂಬರ್ ಹ್ಯಾಕ್ ಆಗಿದೆ. ಕಿಡಿಗೇಡಿಗಳು ಉಪೇಂದ್ರ ದಂಪತಿಯ ಫೋನ್ ನಂಬರ್ ಹ್ಯಾಕ್ ಮಾಡಿದ್ದು, ಮೆಸೇಜ್ ಗಳ ಮೂಲಕ ಹಣ ಹಾಕುವಂತೆ ಕೇಳುತ್ತಿದ್ದಾರೆ.
ಈ ಬಗ್ಗೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ವಿಡಿಯೋ ಮೂಲಕ ಮಾಹಿತಿ ನೀಡಿದ್ದು, ನನ್ನ ಹಾಗೂ ಪತ್ನಿ ಪ್ರಿಯಾಂಕಾ ಅವರ ಫೋನ್ ನಂಬರ್ ಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಫೋನ್ ಮೂಲಕ ಬರಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅರ್ಜಂಟಾಗಿ ಹಣ ನೀಡುವಂತೆ ಮೆಸೇಜ್ ಕಳುಹಿಸುತ್ತಿದ್ದಾರೆ.
ನಮ್ಮ ಫೋನ್ ನಂಬರ್ ಗಳಿಂದ ಕರೆ ಅಥವಾ ಮೆಸೇಜ್ ಬಂದರೆ ದಯವಿಟ್ಟು ಯಾರೂ ಹಣ ಹಾಕಬೇಡಿ. ಫೋನ್ ನಂಬರ್ ಹ್ಯಾಕ್ ಆಗಿದೆ ಎಂದು ಮನವಿ ಮಾಡಿದ್ದಾರೆ.
ಅಲ್ಲದೇ ಫೋನ್ ನಂಬರ್ ಹ್ಯಾಕ್ ಆಗಿರುವ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸುವುದಾಗಿಯೂ ತಿಳಿಸಿದ್ದಾರೆ.