ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಈಬಾರಿ ಯಾವುದೇ ರಾಜಾತಿಥ್ಯವಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಜೈಲುಗಳಲ್ಲಿ ಕಟ್ಟು ನಿಟ್ಟಾದ ನಿಯಮಗಳನ್ನು ಜಾರಿಗೆ ತರಲಾಗಿದ್ದು, ದರ್ಶನ್ ಗೆ ಜೈಲುಶಿಕ್ಷೆ ನರಕಯಾತನೆಯಾಗಿದೆ.
ಈ ನಡುವೆ ಜೈಲಿನಲ್ಲಿ ಹಾಸಿಗೆ, ತಲೆದಿಂಬು ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದ ದರ್ಶನ್ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿತ್ತು. ಅಲ್ಲದೇ ದರ್ಶನ್ ಗೆ ಹಾಸಿಗೆ, ತಲೆದಿಂಬು ಪೂರೈಸುವಂತೆ ಆದೇಶ ನೀಡಿತ್ತು. ಆದಾಗ್ಯೂ ಜೈಲಾಧಿಕಾರಿಗಳು ಈವರೆಗೂ ದರ್ಶನ್ ಗೆ ಯಾವುದೇ ಹಾಸಿಗೆ, ದಿಂಬು ಸೇರಿದಂತೆ ಸೌಲಭ್ಯಗಳನ್ನು ನೀಡಿಲ್ಲ.
ಇದರಿಂದಾಗಿ ದರ್ಶನ್ ಪರ ವಕೀಲರು ಮತ್ತೆ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ಕೋರ್ಟ್ ಆದೇಶ ನೀಡಿದರೂ ಯಾವುದೇ ಸೌಕರ್ಯ ಒದಗಿಸಿಲ್ಲ. ಕೋರ್ಟ್ ಆದೇಶದ ಪ್ರತಿ ಇ-ಮೇಲ್ ಮಾಡಿದ್ದರೂ ದರ್ಶನಗೆ ಯಾವುದೇ ಸೌಲಭ್ಯ ಕೊಟ್ಟಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.