BIG NEWS: ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ. ಆಗ ಅವರ ಹಕ್ಕುಳ ಬಗ್ಗೆ ಅವರಿಗೆ ಅರ್ಥವಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆ ವಿರೋಧಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿಯ ನಾಯಕರು ಸಂವಿಧಾನವನ್ನು ಸರಿಯಾಗಿ ಓದಿಕೊಳ್ಳಬೇಕು. ಏನೇನು ನಿಮ್ಮ ಹಕ್ಕುಗಳಿವೆ ಎಂಬುದು ಅರ್ಥವಾಗುತ್ತದೆ ಎಂದು ಹೇಳಿದರು.

ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಸಂವಿಧಾನ ಬದ್ಧವಾದ ನಿರ್ದಾರವನ್ನೇ ನಾವು ಮಾಡಿದ್ದೇವೆ. ನ್ಯಾಯಾಲಯ ಕೂಡ ಸಂವಿಧಾನದ ಮೇಲೆ ನಡೆಯುತ್ತದೆ. ನಾವುಗಳು ಸಂವಿಧಾನದ ತತ್ವದ ಮೇಲೆ ನಡೆಯುತ್ತೇವೆ. ನಾವು ಪ್ರಮಾಣ ವಚನ ಸ್ವೀಕರಿಸುವುದು ಸಂವಿಧಾನದ ಹೆಸರಿನಲ್ಲಿ. ಪಾಪ ಪ್ರತಾಪ್ ಸಿಂಹಗೆ ಬಿಜೆಪಿಯವರು ಕಳೆದ ಚುನಾವಣೆಯಲ್ಲಿ ಟಿಕೆಟ್ ಕೊಡಲಿಲ್ಲ. ಹಾಗಾಗಿ ರಾಜಕೀಯವಾಗಿ ಬದುಕಿದ್ದೇನೆ ಅಂತ ತೋರಿಸಿಕೊಳ್ಳಲು ಪಿಐಎಲ್ ಸಲ್ಲಿಸಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಮೊದಲು ಬಿಜೆಪಿಯವರು ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read