ಬೆಂಗಳೂರು: ರೈಲ್ವೆ ಇಲಾಖೆ ವತಿಯಿಂದ ಬೆಂಗಳೂರಿನ ಗಾಂಧಿ ನಗರದಲ್ಲಿ ನಡೆಯುತ್ತಿದ್ದ ಹಿಂದಿ ದಿವಸ್ ಕಾರ್ಯಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತೆಯರು ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ.
ಗಾಂಧಿ ನಗರದ ಖಾಸಗಿ ಹೋಟೆಲ್ ನಲ್ಲಿ ರೈಲ್ವೆ ಇಲಾಖೆ ವತಿಯಿಂದ ಹಿಂದಿ ದಿವಸ್ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಕಾರ್ಯಕ್ರಮಕ್ಕೆ ನುಗ್ಗಿದ ಕರವೇ ಮಹಿಳಾ ಕಾರ್ಯಕರ್ತೆಯರು. ಪ್ರತಿಭಟನೆ ನಡೆಸಿದ್ದಾರೆ. ಬ್ಯಾನರ್ ಗಳನ್ನು ಹರಿದು ಹಾಕಿ, ಶೀಲ್ಡ್ ಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರವೇ ಕಾರ್ಯಕರ್ತೆಯರು ನುಗ್ಗುತ್ತಿದ್ದಂತೆ ಹಲವರು ಕಾರ್ಯಕ್ರಮದ ಸ್ಥಳದಿಂದ ಪರಾರುಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಗುತ್ತಿದ್ದಂತೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಭಾಯಿಸಿದ್ದಾರೆ.