ಬೆಂಗಳೂರು: ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂದು , ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢೀಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಧರ್ಮ, ವರ್ಗವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರಹಿತಾಸಕ್ತಿಗಳು, ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು. ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ. ಜನರನ್ನು ತಪ್ಪದಾರಿಗೆಳೆಯುವ ಪ್ರಯತ್ನಗಳು ಖಂಡನೀಯ. ಆರ್ಥಿಕ ಅಸಮಾನತೆ ನಿವಾರಣೆಗಾಗಿ ಗ್ಯಾರಂಟಿ ಯೋಜನೆಗಳ ಮೂಲಕ 98950 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆ ವಿರೋಧಿಸಿ ಮಾಜಿ ಸಂಸದರೊಬ್ಬರು ಕೋರ್ಟ್ ಮೆಟ್ಟಿಲೇರಿದರು. ಅರ್ಜಾ ವಜಾಗೊಂಡಿದೆ. ಒಬ್ಬ ಮಾಜಿ ಲೋಕಸಭಾ ಸದಸ್ಯರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ ಎಂದರೆ ಏನು ಹೇಳಬೇಕು? ಅವರನ್ನು ಮೂರ್ಖರೆಂದು ಕರೆಯಬೇಕಾ? ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದರು. ಜನಪ್ರತಿನಿಧಿಯಾದವರಿಗೆ ಸಂವಿಧಾನದ ಆಶಯಗಳ ಬಗ್ಗೆ ಗೊತ್ತಿಲ್ಲದಿದ್ದರೆ ಹೇಗೆ? ಹಾಗಾಗಿ ಸಂವಿಧಾನದ ಬಗ್ಗೆ ಎಲ್ಲರೀ ತಿಳಿದಿರಬೇಕು ಎಂದರು.