ಬೆಂಗಳೂರು: ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದು, ನಟ ರೆಬಲ್ ಸ್ಟಾರ್ ಅಂಬರೀಶ್ ಅವರಿಗೂ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಲಾಗಿದೆ.
ವಿಷ್ಣುವರ್ಧನ್ ಮತ್ತು ಅಂಬರೀಶ್ ಅವರು ಕನ್ನಡ ಚಿತ್ರರಂಗದ ಕುಚುಕುಗಳಾಗಿದ್ದವರು. ವಿಷ್ಣುವರ್ಧನ್ ಅವರೊಂದಿಗೆ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ನಟಿ ತಾರಾ ಅನುರಾಧ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ನಟಿ ತಾರಾ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.
ಸಂಪುಟದಲ್ಲಿ ಚರ್ಚಿಸಬೇಕಾದ ವಿಷಯ ಇದಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ, ಡಿಸಿಎಂ ಭರವಸೆ ನೀಡಿದ್ದಾರೆ.