ನವದೆಹಲಿ: ಬಹುಭಾಷಾ ನಟಿ ಊರ್ವಶಿ ರೌಟೇಲಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿಗೊಳಿಸಿದ್ದಾರೆ.
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ ಸಂಬಂಧ ರೌಟೇಲಾ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಸೆಪ್ಟೆಂಬರ್ 16ರಂದು ವಿಚಾರಣೆಗೆ ಹಾಜರಾಗುವಂತೆ ಊರ್ವಶಿ ರೌಟೇಲಾಗೆ ಸೂಚನೆ ನೀಡಲಾಗಿದೆ.
ನಡೆಯುತ್ತಿರುವ 1xBet ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಅವರು ಸೆಪ್ಟೆಂಬರ್ 16 ರಂದು ದೆಹಲಿಯ ED ಪ್ರಧಾನ ಕಚೇರಿಗೆ ಹಾಜರಾಗಲಿದ್ದಾರೆ.
ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಅವರನ್ನು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿತು. 39 ವರ್ಷದ ಮಾಜಿ ಕ್ರಿಕೆಟಿಗ ಕೆಲವು ಅನುಮೋದನೆಗಳ ಮೂಲಕ ಅಪ್ಲಿಕೇಶನ್ಗೆ ಸಂಪರ್ಕ ಹೊಂದಿದ್ದಾರೆಂದು ತಿಳಿದುಬಂದಿದೆ