ಜಾತಿಗಣತಿಯಿಂದ ಹಿಂದೆ ಸರಿಯಲು ‘ಆಶಾ’ ಕಾರ್ಯಕರ್ತೆಯರ ನಿರ್ಧಾರ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ.

ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ.

ಸಮೀಕ್ಷೆ ವೇಳೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸಮೀಕ್ಷೆಯ ನಮೂನೆಯನ್ನು ವಿತರಿಸುವುದು ಸೇರಿ ಇತರೆ ಪೂರಕ ಕಾರ್ಯನಿರ್ವಹಿಸಬೇಕು. ಸಮೀಕ್ಷೆ ನಮೂನೆ ವಿತರಿಸುವ ಜೊತೆಗೆ ಸಮೀಕ್ಷೆಯಲ್ಲಿರುವ 60 ಪ್ರಶ್ನೆಗಳಿಗೆ ಮಾಹಿತಿ ನೀಡಲು ಮುಂಚಿತವಾಗಿ ತಯಾರಿರುವಂತೆ ನೋಡಿಕೊಳ್ಳಬೇಕು. ವಿವರಗಳನ್ನು ಮೊಬೈಲ್ ಅಪ್ಲಿಕೇಶನ್ ನಲ್ಲಿ ಅಪ್ಲೋಡ್ ಸೇರಿ ಇನ್ನಿತರೆ ಕಾರ್ಯ ಮಾಡಬೇಕೆಂದು ತಿಳಿಸಲಾಗಿದೆ.

 ಇದಕ್ಕಾಗಿ 2000 ರೂ. ಗೌರವಧನ ನಿಗದಿಗೊಳಿಸಲಾಗಿದೆ. ಆದರೆ, ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣ ಇನ್ನೂ ಪಾವತಿಸಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ. ಸಮೀಕ್ಷೆ ಕಾರ್ಯ ಹೆಚ್ಚುವರಿ ಕೆಲಸವಾಗಿರುವುದರಿಂದ ಹೆಚ್ಚಿನ ಗೌರವಧನ ನೀಡುವುದು ಸೇರಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು. ಇದಕ್ಕೆ ಸರ್ಕಾರ ಒಪ್ಪಿದಲ್ಲಿ ಮಾತ್ರ ಸಮೀಕ್ಷೆ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read