ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಬುರುಡೆ ಚಿನ್ನಯ್ಯನಿಗೆ ಜೈಲುವಾಸವೇ ಗತಿಯಾಗಿದೆ. ಜಾಮೀನು ಅರ್ಜಿ ವಜಾಗೊಂಡಿದೆ.
ಶಿವಮೊಗ್ಗ ಜೈಲು ಸೇರಿರುವ ಬುರುಡೆ ಚಿನ್ನಯ್ಯ, ಜಾಮೀನಿಗಾಗಿ ಕೋರಿ ಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಜೆ ಎಂಎಫ್ ಸಿ ಕೋರ್ಟ್, ಚಿನ್ನಯ್ಯ ಜಾಮೀನು ಅರ್ಜಿ ವಜಾಗೊಳಿಸಿದೆ.
ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಚಿನ್ನಯ್ಯ ಜಾಮೀನಿಗೆ ಎಸ್ ಐಟಿ ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನಯ್ಯ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಜೈಲುವಾಸವೇ ಗತಿಯಾಗಿದೆ.